Matthew 14:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಹಾನನಿಗೆ ಸಂಭವಿಸಿದ್ದನ್ನು ಕೇಳಿದಾಗ ಯೇಸು ದೋಣಿಹತ್ತಿ ನಿರ್ಜನವಾದ ಸ್ಥಳಕ್ಕೆ ಒಬ್ಬನೇ ಹೋದನು. ಆದರೆ ಈ ಸುದ್ದಿ ಜನರಿಗೆ ತಿಳಿಯಿತು. ಆದ್ದರಿಂದ ಅವರು ತಮ್ಮ ಊರುಗಳನ್ನು ಬಿಟ್ಟು ಕಾಲುನಡಿಗೆಯಲ್ಲೇ ಆತನಿದ್ದ ಸ್ಥಳಕ್ಕೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.
Kannada BSI Bible 2016
ಯೇಸು ಆ ವಿಷಯವನ್ನು ಕೇಳಿದಾಗ ದೋಣಿ ಯನ್ನು ಹತ್ತಿ ಅಲ್ಲಿಂದ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಹೊರಟುಹೋದನು. ಇದನ್ನು ಕೇಳಿ ಜನರು ಪಟ್ಟಣ ಗಳಿಂದ ಕಾಲು ನಡಿಗೆಯಾಗಿ ಆತನನ್ನು ಹಿಂಬಾಲಿ ಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ವಿಂಗಡವಾಗಿ ಅಡವಿಗೆ ಹೋದನು. ಇದನ್ನು ಕೇಳಿದ ಜನರು ಗುಂಪುಗುಂಪಾಗಿ ತಮ್ಮ ತಮ್ಮ ಊರುಗಳಿಂದ ಕಾಲುನಡಿಗೆಯಿಂದ ಆತನ ಹಿಂದೆ ಬಂದರು.
Kannada Bible (KNCL) BSI 2016
ಈ ಸಮಾಚಾರವನ್ನು ಕೇಳಿದ ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು, ದೋಣಿಹತ್ತಿ ನಿರ್ಜನಪ್ರದೇಶಕ್ಕೆ ಒಬ್ಬಂಟಿಗರಾಗಿ ಹೊರಟರು. ಇದನ್ನು ತಿಳಿದುಕೊಂಡ ಜನರು ಊರೂರುಗಳಿಂದ ಹೊರಟು ಗುಂಪುಗುಂಪಾಗಿ ಅವರ ಹಿಂದೆಯೇ ಕಾಲ್ದಾರಿಯಲ್ಲಿ ನಡೆದುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಆ ವಿಷಯವನ್ನು ಕೇಳಿದಾಗ ದೋಣಿಯನ್ನು ಹತ್ತಿ ಅಲ್ಲಿಂದ ಏಕಾಂತ ಸ್ಥಳಕ್ಕೆ ಹೊರಟರು. ಜನರು ಇದನ್ನು ಕೇಳಿ ಪಟ್ಟಣಗಳಿಂದ ಕಾಲು ನಡಿಗೆಯಲ್ಲಿ ಯೇಸುವನ್ನು ಹಿಂಬಾಲಿಸಿದರು.