Matthew 14:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.
Kannada BSI Bible 2016
ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಆದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು.
Kannada Bible (KNCL) BSI 2016
ಇದಾದ ಮೇಲೆ ಯೇಸುಸ್ವಾಮಿ ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಹೋಗಬೇಕೆಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಆಚೆದಡಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.