Matthew 14:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಷ್ಟರಲ್ಲಿ ದೋಣಿಯು ಸರೋವರದ ಮೇಲೆ ಬಹಳ ದೂರ ಹೋಗಿತ್ತು. ಎದುರುಗಾಳಿಯಿಂದ ಅಲೆಗಳ ಬಡಿತಕ್ಕೆ ಸಿಕ್ಕಿಹಾಕಿಕೊಂಡಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದೋಣಿಯು ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
Kannada BSI Bible 2016
ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ದೋಣಿಯು ಭೂವಿುಗೆ ಬಹು ದೂರ ಹೋಗಿತ್ತು. ಮತ್ತು ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಒದ್ದಾಡುತ್ತಿತ್ತು.
Kannada Bible (KNCL) BSI 2016
ಅಷ್ಟರಲ್ಲಿ ದೋಣಿ ದಡದಿಂದ ಬಹುದೂರ ಸಾಗಿತ್ತು. ಎದುರುಗಾಳಿ ಬೀಸಿ ಅದು ಅಲೆಗಳ ಬಡಿತಕ್ಕೆ ಸಿಕ್ಕಿಕೊಂಡಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಷ್ಟರಲ್ಲಿ ದೋಣಿಯು ತೀರದಿಂದ ಬಹುದೂರ ಹೋಗಿತ್ತು, ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.