Matthew 15:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬನು ಕಲುಷಿತನಾಗುವುದು ತನ್ನ ಬಾಯಿಂದ ತಿನ್ನುವ ಪದಾರ್ಥಗಳಿಂದಲ್ಲ. ಅವನ ಬಾಯಿಂದ ಬರುವ ಕೆಟ್ಟಮಾತುಗಳೇ ಅವನನ್ನು ಕಲುಷಿತಗೊಳಿಸುತ್ತವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು” ಎಂದು ಹೇಳಿದನು.
Kannada BSI Bible 2016
ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಯೊಳಕ್ಕೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಬಾಯೊಳಗಿಂದ ಹೊರಡುವಂಥದೇ ಮನುಷ್ಯನನ್ನು ಹೊಲೆಮಾಡುವದು ಎಂದು ಹೇಳಿದನು.
Kannada Bible (KNCL) BSI 2016
ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಕಲುಷಿತಗೊಳಿಸುವುದಿಲ್ಲ; ಬಾಯೊಳಗಿಂದ ಹೊರಕ್ಕೆ ಬರುವಂಥದ್ದೇ ಮನುಷ್ಯನನ್ನು ಕಲುಷಿತಗೊಳಿಸುತ್ತದೆ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ, ಆದರೆ ಬಾಯೊಳಗಿಂದ ಹೊರಗೆ ಬರುವಂಥದ್ದೇ ಮನುಷ್ಯನನ್ನು ಅಶುದ್ಧ ಮಾಡುತ್ತದೆ,” ಎಂದು ಹೇಳಿದರು.