Matthew 15:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಒಬ್ಬ ಮನುಷ್ಯನ ಬಾಯಿಂದ ಹೊರಡುವ ಕೆಟ್ಟಮಾತುಗಳು ಅವನ ಆಲೋಚನೆಯಿಂದ ಉದ್ಭವಿಸಿ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಬಾಯೊಳಗಿಂದ ಹೊರ ಬರುವಂಥವುಗಳು ಹೃದಯದಿಂದ ಬರುತ್ತವೆ. ಇವೇ ಮನುಷ್ಯನನ್ನು ಅಶುದ್ಧಿಮಾಡುವವು.
Kannada BSI Bible 2016
ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಬಾಯೊಳಗಿಂದ ಹೊರಡುವಂಥವುಗಳು ಮನಸ್ಸಿನೊಳಗಿಂದ ಬರುತ್ತವೆ; ಇವೇ ಮನುಷ್ಯನನ್ನು ಹೊಲೆ ಮಾಡುವವು.
Kannada Bible (KNCL) BSI 2016
ಆದರೆ ಬಾಯಿಂದ ಹೊರಡುವಂಥವು ಅವನ ಹೃದಯದಿಂದ ಹೊರಹೊಮ್ಮುತ್ತವೆ; ಇವು ಮನುಷ್ಯನನ್ನು ಕಲುಷಿತಗೊಳಿಸುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವು ಹೃದಯದೊಳಗಿಂದ ಬಂದು ಮನುಷ್ಯನನ್ನು ಅಶುದ್ಧ ಮಾಡುತ್ತವೆ.