Matthew 15:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಮ್ಮ ಪೂರ್ವಿಕರಿಂದ ಬಂದ ಸಂಪ್ರದಾಯಗಳಿಗೆ ನಿನ್ನ ಶಿಷ್ಯರು ಏಕೆ ವಿಧೇಯರಾಗಿರುವುದಿಲ್ಲ? ನಿನ್ನ ಶಿಷ್ಯರು ಊಟ ಮಾಡುವುದಕ್ಕೆ ಮುಂಚೆ ಕೈ ತೊಳೆಯುವುದಿಲ್ಲವೇಕೆ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ” ಎಂದು ಕೇಳಿದರು.
Kannada BSI Bible 2016
ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಶಿಷ್ಯರು ಹಿರಿಯರಿಂದ ಬಂದ ಸಂಪ್ರದಾಯವನ್ನು ಯಾಕೆ ಮೀರುತ್ತಾರೆ? ಅವರು ಕೈತೊಳಕೊಳ್ಳದೆ ಆಹಾರ ತೆಗೆದುಕೊಳ್ಳುತ್ತಾರಲ್ಲಾ ಎಂದು ಕೇಳಿದ್ದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ -
Kannada Bible (KNCL) BSI 2016
“ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಸಂಪ್ರದಾಯಗಳನ್ನು ಮೀರುವುದೇಕೆ? ಅವರು ಊಟಕ್ಕೆ ಮುಂಚೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದೇಕೆ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯವನ್ನು ಏಕೆ ಮೀರುತ್ತಾರೆ? ಅವರು ಊಟಕ್ಕೆ ಮುಂಚೆ ತಮ್ಮ ಕೈಗಳನ್ನು ಏಕೆ ತೊಳೆದುಕೊಳ್ಳುವುದಿಲ್ಲ?” ಎಂದರು.