Matthew 15:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.
Kannada BSI Bible 2016
ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸೀಮೆಯಿಂದ ಕಾನಾನ್ಯರವಳೊಬ್ಬಳು ಹೊರಟು ಬಂದು - ಸ್ವಾಮೀ, ದಾವೀದನ ಕುಮಾರನೇ, ನನ್ನನ್ನು ಕರುಣಿಸು. ನನ್ನ ಮಗಳಿಗೆ ದೆವ್ವದ ಕಾಟ ಬಹಳವಾಗಿದೆ ಎಂದು ಕೂಗಿಕೊಂಡಳು.
Kannada Bible (KNCL) BSI 2016
ಅಲ್ಲಿ ವಾಸವಾಗಿದ್ದ ಕಾನಾನ್ ನಾಡಿನ ಮಹಿಳೆ ಒಬ್ಬಳು ಅವರ ಬಳಿಗೆ ಬಂದಳು. “ಸ್ವಾಮೀ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ, ಕಾನಾನ್ಯ ಸ್ತ್ರೀಯೊಬ್ಬಳು ಬಂದು ಅವರಿಗೆ, “ಸ್ವಾಮೀ, ದಾವೀದನ ಪುತ್ರನೇ, ನನ್ನನ್ನು ಕರುಣಿಸು. ನನ್ನ ಮಗಳು ದೆವ್ವದ ಕಾಟದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.