Matthew 15:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೇಸು ಆ ಸ್ತ್ರೀಗೆ ಉತ್ತರ ಕೊಡಲಿಲ್ಲ. ಆದ್ದರಿಂದ ಶಿಷ್ಯರು ಯೇಸುವಿನ ಬಳಿಗೆ ಬಂದು, “ಆ ಸ್ತ್ರೀಗೆ ಹೊರಟುಹೋಗುವುದಕ್ಕೆ ಹೇಳು. ಆಕೆಯು ಕೂಗಿಕೊಂಡು ನಮ್ಮ ಹಿಂದೆಯೇ ಬರುತ್ತಿದ್ದಾಳೆ” ಎಂದು ಕೇಳಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು.
Kannada BSI Bible 2016
ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆತನು ಆಕೆಗೆ ಏನೂ ಉತ್ತರಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು - ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ; ಆಕೆಯನ್ನು ಕಳುಹಿಸಿಬಿಡು ಎಂದು ಆತನನ್ನು ಬೇಡಿಕೊಂಡರು.
Kannada Bible (KNCL) BSI 2016
ಯೇಸು ಆಕೆಗೆ ಒಂದು ಮಾತನ್ನೂ ಹೇಳಲಿಲ್ಲ. ಶಿಷ್ಯರು ಹತ್ತಿರಕ್ಕೆ ಬಂದು, “ಇವಳನ್ನು ಕಳಿಸಿಬಿಡಿ, ಒಂದೇ ಸಮನೆ ಗೋಳಿಡುತ್ತಾ, ನಮ್ಮನ್ನು ಬೆಂಬತ್ತಿ ಬರುತ್ತಿದ್ದಾಳೆ,” ಎಂದು ಕೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು ಆಕೆಗೆ ಉತ್ತರ ಕೊಡಲಿಲ್ಲ. ಆಗ ಶಿಷ್ಯರು ಯೇಸುವಿನ ಬಳಿ ಬಂದು, “ಆಕೆಯನ್ನು ಕಳುಹಿಸಿಬಿಡು, ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ” ಎಂದು ಕೇಳಿಕೊಂಡರು.