Matthew 15:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸ್ತ್ರೀಯು, “ಹೌದು ಪ್ರಭುವೇ, ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ಆಹಾರದ ತುಂಡುಗಳನ್ನು ತಿನ್ನುತ್ತವೆಯಲ್ಲಾ” ಎಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು.
Kannada BSI Bible 2016
ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ - ಸ್ವಾಮೀ, ಆ ಮಾತು ನಿಜವೇ; ನಾಯಿಮರಿಗಳಂತೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ ಅಂದಳು.
Kannada Bible (KNCL) BSI 2016
ಆಗ ಆಕೆ, “ಅದು ನಿಜ ಸ್ವಾಮೀ, ನಾಯಿಗಳಾದರೂ ತಮ್ಮ ಯಜಮಾನನ ಮೇಜಿನಿಂದ ಕೆಳಕ್ಕೆ ಬೀಳುವ ಚೂರುಪಾರನ್ನು ತಿನ್ನುತ್ತವೆ, ಅಲ್ಲವೇ?’ ಎಂದು ಮರುತ್ತರ ಕೊಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆಕೆಯು, “ಸ್ವಾಮೀ, ಅದು ನಿಜವೇ, ಆದರೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ನಾಯಿಮರಿಗಳು ತಿನ್ನುತ್ತವಲ್ಲಾ,” ಎಂದಳು.