Matthew 15:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು.
Kannada BSI Bible 2016
ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ಆಕೆಗೆ - ಅಮ್ಮಾ, ನಿನ್ನ ನಂಬಿಕೆ ಬಹಳ; ನಿನ್ನ ಮನಸ್ಸಿನಂತೆ ಆಗಲಿ ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥಳಾದಳು.
Kannada Bible (KNCL) BSI 2016
ಆಗ ಯೇಸು, “ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ,” ಎಂದರು. ಅದೇ ಕ್ಷಣದಲ್ಲಿ ಆಕೆಯ ಮಗಳು ಗುಣಹೊಂದಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಉತ್ತರವಾಗಿ ಆಕೆಗೆ, “ಅಮ್ಮಾ ನಿನ್ನ ನಂಬಿಕೆಯು ದೊಡ್ಡದು! ನೀನು ಇಷ್ಟಪಟ್ಟಂತೆಯೇ ನಿನಗಾಗಲಿ,” ಎಂದು ಹೇಳಿದರು. ಆಕೆಯ ಮಗಳು ಅದೇ ಗಳಿಗೆಯಲ್ಲಿ ಗುಣಹೊಂದಿದಳು.