Matthew 15:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಗುಂಪುಗುಂಪಾಗಿ ಯೇಸುವಿನ ಬಳಿಗೆ ಬಂದರು. ಅವರು ಅನೇಕ ಬಗೆಯ ಕಾಯಿಲೆಯವರನ್ನು ಕರೆದುತಂದು, ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಅಲ್ಲಿ ಅಂಗವಿಕಲರು, ಕುರುಡರು, ಕುಂಟರು, ಕಿವುಡರು ಮತ್ತು ಇತರ ಅನೇಕ ಜನರಿದ್ದರು. ಆತನು ಇವರನ್ನೆಲ್ಲರನ್ನು ಗುಣಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
Kannada BSI Bible 2016
ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಜನರು ಗುಂಪುಗುಂಪಾಗಿ ಆತನ ಬಳಿಗೆ ಬಂದು ಕುಂಟರು ಕುರುಡರು ಮೂಕರು ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ಕರತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು; ಆತನು ಅವರನ್ನು ವಾಸಿಮಾಡಿದನು.
Kannada Bible (KNCL) BSI 2016
ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಕುಂಟರು, ಕುರುಡರು, ಮೂಕರು, ಅಂಗವಿಕಲರು ಮುಂತಾದ ಅನೇಕರನ್ನು ತಮ್ಮೊಡನೆ ಕರೆತಂದು ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಯೇಸು ಅವರನ್ನು ಗುಣಪಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು, ಕುರುಡರನ್ನು, ಮೂಕರನ್ನು, ಊನವಾದವರನ್ನು ಮತ್ತು ಬೇರೆ ಅನೇಕ ರೋಗಿಗಳನ್ನು ತಮ್ಮೊಂದಿಗೆ ಕರೆದುಕೊಂಡು ಬಂದು ಯೇಸುವಿನ ಪಾದದ ಬಳಿಯಲ್ಲಿ ಬಿಟ್ಟರು. ಯೇಸು ಅವರನ್ನೆಲ್ಲಾ ಸ್ವಸ್ಥಪಡಿಸಿದರು.