Matthew 15:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೂಕರು ಮತ್ತೆ ಮಾತಾಡುವುದನ್ನೂ ಕುಂಟರು ನಡೆದಾಡುವುದನ್ನೂ ಅಂಗವಿಕಲರು ಸ್ವಸ್ಥರಾದದ್ದನ್ನೂ ಕುರುಡರಿಗೆ ಮತ್ತೆ ದೃಷ್ಟಿ ಬಂದದ್ದನ್ನೂ ಕಂಡು ಜನರೆಲ್ಲರೂ ಅತ್ಶಾಶ್ಚರ್ಯಪಟ್ಟು ಇಸ್ರೇಲರ ದೇವರನ್ನು ಕೊಂಡಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ, ಕುಂಟರು ನಡೆದಾಡುವುದನ್ನೂ, ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು.
Kannada BSI Bible 2016
ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂಕರಾಗಿದ್ದವರು ಮಾತಾಡಿದ್ದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ ಕುಂಟರಿಗೆ ಕಾಲುಬಂದದ್ದನ್ನೂ ಕುರುಡರಿಗೆ ಕಣ್ಣು ಬಂದದ್ದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ ಜನರ ದೇವರನ್ನು ಕೊಂಡಾಡಿದರು.
Kannada Bible (KNCL) BSI 2016
ಮೂಕರು ಮಾತನಾಡುವುದನ್ನೂ ಅಂಗವಿಕಲರು ಸ್ವಸ್ಥರಾಗುವುದನ್ನೂ ಕುಂಟರು ನಡೆಯುವುದನ್ನೂ ಕುರುಡರು ನೋಡುವುದನ್ನೂ ಈ ಜನರು ಕಂಡು ಆಶ್ಚರ್ಯಚಕಿತರಾಗಿ ಇಸ್ರಯೇಲಿನ ದೇವರನ್ನು ಕೊಂಡಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂಕರು ಮಾತನಾಡುವುದನ್ನೂ ಊನವಾದವರು ಸ್ವಸ್ಥರಾಗಿರುವುದನ್ನೂ ಕುಂಟರು ನಡೆದಾಡುವುದನ್ನೂ ಕುರುಡರು ಕಾಣುವುದನ್ನೂ ಜನಸಮೂಹದವರು ಕಂಡು ಆಶ್ಚರ್ಯಪಟ್ಟರು. ಅವರು ಇಸ್ರಾಯೇಲಿನ ದೇವರನ್ನು ಕೊಂಡಾಡಿದರು.