Matthew 15:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ತನ್ನ ಶಿಷ್ಯರನ್ನು ಕರೆದು, “ನಾನು ಈ ಜನರಿಗಾಗಿ ದುಃಖಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಈಗ ಇವರಿಗೆ ಊಟಕ್ಕೆ ಏನೂ ಇಲ್ಲ. ಇವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಮನಸ್ಸಿಲ್ಲ. ಇವರು ಮನೆಗೆ ಹೋಗುತ್ತಿರುವಾಗ ಬಳಲಿಹೋಗಬಹುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು.
Kannada BSI Bible 2016
ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ತನ್ನ ಶಿಷ್ಯರನ್ನು ಹತ್ತರಕ್ಕೆ ಕರೆದು ಅವರಿಗೆ - ಈ ಜನರನ್ನು ನೋಡಿ ಕನಿಕರಪಡುತ್ತೇನೆ; ಅವರು ನನ್ನ ಬಳಿಗೆ ಬಂದು ಈಗ ಮೂರು ದಿನವಾಯಿತು; ಅವರಿಗೆ ಊಟಕ್ಕೆ ಏನೂ ಇಲ್ಲ; ಅವರನ್ನು ಉಪವಾಸವಾಗಿ ಕಳುಹಿಸಿಬಿಡುವದಕ್ಕೆ ನನಗೆ ಮನಸ್ಸಿಲ್ಲ; ದಾರಿಯಲ್ಲಿ ಬಳಲಿಹೋದಾರು ಎಂದು ಹೇಳಿದನು.
Kannada Bible (KNCL) BSI 2016
ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು, “ಈ ಜನಸ್ತೋಮ ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದೆ. ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡು ನನ್ನ ಹೃದಯ ಕರಗುತ್ತದೆ. ಇವರನ್ನು ಹಸಿದ ಹೊಟ್ಟೆಯಲ್ಲಿ ಕಳಿಸಿಬಿಡಲು ನನಗೆ ಇಷ್ಟವಿಲ್ಲ, ದಾರಿಯಲ್ಲಿ ಬಳಲಿ ಬಿದ್ದಾರು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಶಿಷ್ಯರನ್ನು ಕರೆದು, “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ, ದಾರಿಯಲ್ಲಿ ಅವರು ಬಳಲಿ ಹೋಗುವರು. ಇವರನ್ನು ಉಪವಾಸವಾಗಿ ಕಳುಹಿಸುವುದಕ್ಕೆ ನನಗೆ ಮನಸ್ಸಿಲ್ಲ,” ಎಂದರು.