Matthew 15:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಿಷ್ಯರು ಯೇಸುವಿಗೆ, “ಈ ಜನರೆಲ್ಲರಿಗೂ ಊಟಕ್ಕೆ ಬೇಕಾಗುವಷ್ಟು ರೊಟ್ಟಿ ನಮಗೆ ಎಲ್ಲಿ ಸಿಕ್ಕುತ್ತದೆ? ಇಲ್ಲಿಗೆ ಯಾವ ಊರೂ ಸಮೀಪವಾಗಿಲ್ಲ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು.
Kannada BSI Bible 2016
ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಯರು - ಇಷ್ಟು ಜನರನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿ ಈ ಅಡವಿಯಲ್ಲಿ ನಮಗೆ ಎಲ್ಲಿಂದ ಬಂದೀತು? ಅನ್ನಲು
Kannada Bible (KNCL) BSI 2016
ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಶಿಷ್ಯರು, “ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ನಿರ್ಜನ ಪ್ರದೇಶದಲ್ಲಿ ನಮಗೆ ಎಲ್ಲಿಂದ ರೊಟ್ಟಿ ಸಿಕ್ಕೀತು?” ಎಂದರು.