Matthew 15:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದನು. ಶಿಷ್ಯರು, “ನಮ್ಮಲ್ಲಿ ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳಿವೆ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು.
Kannada BSI Bible 2016
ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು - ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು - ಏಳು ರೊಟ್ಟಿಗಳು ಮತ್ತು ಕೆಲವು ಸಣ್ಣ ಮೀನುಗಳು ಅವೆ ಅಂದರು.
Kannada Bible (KNCL) BSI 2016
“ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಯೇಸು ಕೇಳಿದರು. “ಏಳು ರೊಟ್ಟಿಗಳು ಮತ್ತು ಕೆಲವು ಸಣ್ಣ ಮೀನುಗಳಿವೆ,” ಎಂದು ಶಿಷ್ಯರು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದರು. ಶಿಷ್ಯರು, “ಏಳು ರೊಟ್ಟಿಗಳು ಮತ್ತು ಕೆಲವು ಸಣ್ಣ ಮೀನುಗಳಿವೆ,” ಎಂದರು.