Matthew 15:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಅವುಗಳನ್ನು ಜನರಿಗೆ ಹಂಚಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.
Kannada BSI Bible 2016
ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರ ಸ್ತೋತ್ರಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಡಲು ಶಿಷ್ಯರು ಗುಂಪಿನವರಿಗೆ ಹಂಚಿಕೊಟ್ಟರು.
Kannada Bible (KNCL) BSI 2016
ಅನಂತರ ಆ ಏಳು ರೊಟ್ಟಿಗಳನ್ನೂ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಸಲ್ಲಿಸಿ, ಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಟ್ಟರು; ಶಿಷ್ಯರು ಜನರಿಗೆ ಬಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೇಸು ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ, ಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಡಲು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.