Matthew 15:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಒಬ್ಬ ವ್ಯಕ್ತಿಯು ತನ್ನ ತಂದೆಗಾಗಲಿ ತಾಯಿಗಾಗಲಿ ‘ನಿಮಗೆ ಸಹಾಯ ಮಾಡಲು ನನಗೆ ಸಾಧ್ಯವಿಲ್ಲ, ಏಕೆಂದರೆ ನನ್ನಲ್ಲಿರುವ ಪ್ರತಿಯೊಂದು ದೇವರಿಗೆ ಪ್ರತಿಷ್ಠಿತವಾಗಿದೆ’ ಎಂದು ಹೇಳಿದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವೋ, ‘ಯಾವನಾದರೂ ತನ್ನ ತಂದೆಯನಾಗಲಿ, ತಾಯಿಯನ್ನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ’ ಎಂದು ಹೇಳಿದರೆ,
Kannada BSI Bible 2016
ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವೋ, ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ನೋಡಿ - ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗಾಗಿ ಇಟ್ಟಿದ್ದೇನೆ ಎಂದು ಹೇಳುವದಾದರೆ
Kannada Bible (KNCL) BSI 2016
ನೀವೋ, ಯಾರಾದರೂ ತನ್ನ ತಂದೆಗೆ ಅಥವಾ ತಾಯಿಗೆ, ‘ನನ್ನಿಂದ ನಿಮಗೆ ಸಲ್ಲತಕ್ಕದ್ದು ದೇವರಿಗೆ ಮುಡಿಪು’ ಎಂದು ಹೇಳಿಬಿಟ್ಟರೆ ಮುಗಿಯಿತು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು, ಯಾರಾದರೂ ತನ್ನ ತಂದೆಗೆ ಇಲ್ಲವೆ ತಾಯಿಗೆ, ನಾನು ನಿಮ್ಮ ಸಹಾಯಕ್ಕಾಗಿ ಇಟ್ಟಿದ್ದನ್ನು, ‘ದೇವರಿಗೆ ಕೊಟ್ಟಿದ್ದೇನೆ’ ಎಂದು ಹೇಳುವುದಾದರೆ,