Matthew 15:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ತನ್ನ ತಂದೆಯನ್ನು ಗೌರವಿಸಬೇಕಿಲ್ಲ ಎಂದು ನೀವು ಬೋಧಿಸುತ್ತೀರಿ. ಹೀಗಿರಲು ನಿಮ್ಮ ಸಂಪ್ರದಾಯವೇ ದೇವರ ಆಜ್ಞೆಯನ್ನು ತಳ್ಳಿಹಾಕಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.
Kannada BSI Bible 2016
ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾದದ್ದಿಲ್ಲ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿವಿುತ್ತ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.
Kannada Bible (KNCL) BSI 2016
ಇನ್ನು ಅವನು ತನ್ನ ತಂದೆ ತಾಯಿಗಳನ್ನು ಗೌರವಿಸಬೇಕಾಗಿಲ್ಲ, ಎಂದು ಬೋಧಿಸುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನೇ ನಿರರ್ಥಕಮಾಡಿಬಿಟ್ಟಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಅವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಗೌರವಿಸಬೇಕಾಗಿಲ್ಲ’ ಎಂದು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ.