Matthew 16:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರಿಸಾಯರು ಮತ್ತು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವನ್ನು ಪರೀಕ್ಷಿಸಲು, “ನೀನು ದೇವರಿಂದ ಬಂದವನೆಂಬುದನ್ನು ನಿರೂಪಿಸಲು ಒಂದು ಅದ್ಭುತಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.
Kannada BSI Bible 2016
ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಫರಿಸಾಯರೂ ಸದ್ದುಕಾಯರೂ ಬಂದು ಆತನನ್ನು ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕೆಂದು ಕೇಳಿದರು. ಆತನು ಅವರಿಗೆ -
Kannada Bible (KNCL) BSI 2016
ತರುವಾಯ ಫರಿಸಾಯರು ಮತ್ತು ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸ್ವಾಮಿಯನ್ನು ಪರೀಕ್ಷಿಸುವ ದುರದ್ದೇಶದಿಂದ, “ನೀನು ದೇವರಿಂದ ಬಂದವನೆಂದು ಸೂಚಿಸಲು ಅದ್ಭುತವೊಂದನ್ನು ನಮಗೆ ಮಾಡಿತೋರಿಸು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು.