Matthew 16:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಾನು ನಿಮಗೆ ಹೇಳಿದ್ದು ರೊಟ್ಟಿಯ ಕುರಿತಲ್ಲ. ನೀವು ಇದನ್ನು ಅರ್ಥ ಮಾಡಿಕೊಳ್ಳುವುದಿಲ್ಲವೇಕೆ? ಫರಿಸಾಯರು ಮತ್ತು ಸದ್ದುಕಾಯರ ಹುಳಿಗೆ (ಕೆಟ್ಟ ಪ್ರಭಾವಕ್ಕೆ) ಒಳಗಾಗದಂತೆ ನೀವು ಎಚ್ಚರಿಕೆಯಿಂದಿರಬೇಕೆಂದು ನಾನು ನಿಮ್ಮನ್ನು ಎಚ್ಚರಿಸಿದೆನು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.
Kannada BSI Bible 2016
ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ರೊಟ್ಟಿಯನ್ನು ಕುರಿತು ಮಾತಾಡಲಿಲ್ಲವೆಂಬದು ನಿಮಗೆ ತಿಳಿಯದೆ ಇರುವದು ಹೇಗೆ? ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಅಂದನು.
Kannada Bible (KNCL) BSI 2016
ಹೀಗಿದ್ದೂ ನಾನು ಈಗ ರೊಟ್ಟಿಯನ್ನು ಕುರಿತು ಎಚ್ಚರಿಸಲಿಲ್ಲವೆಂದು ನೀವು ತಿಳಿಯದೆಹೋದಿರಲ್ಲಾ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು.