Matthew 16:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಶಿಷ್ಯರು ಯೇಸು ಹೇಳಿದ್ದನ್ನು ಅರ್ಥಮಾಡಿಕೊಂಡರು. ಆತನು ಅವರಿಗೆ ರೊಟ್ಟಿಯಲ್ಲಿ ಬೆರೆಸಿದ್ದ ಹುಳಿಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಲಿಲ್ಲ. ಫರಿಸಾಯರು ಮತ್ತು ಸದ್ದುಕಾಯರ ಬೋಧನೆಯ ಪ್ರಭಾವಕ್ಕೆ ಒಳಗಾಗದಂತೆ ಎಚ್ಚರಿಕೆಯಾಗಿರಬೇಕೆಂದು ಹೇಳಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.
Kannada BSI Bible 2016
ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು ರೊಟ್ಟಿಯ ಹುಳಿ ಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬದಾಗಿ ತಿಳುಕೊಂಡರು.
Kannada Bible (KNCL) BSI 2016
ರೊಟ್ಟಿಯ ಹಿಟ್ಟನ್ನು ಹುದುಗೆಬ್ಬಿಸುವ ಹುಳಿಯನ್ನು ಕುರಿತು ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯವಾಗಿ ಜಾಗರೂಕರಾಗಿರಬೇಕೆಂದು ಯೇಸು ಎಚ್ಚರಿಸಿದರೆಂದು ಆಗ ಶಿಷ್ಯರು ಅರ್ಥಮಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು, ರೊಟ್ಟಿ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಯೇಸು ಹೇಳಿದ್ದನ್ನು ಗ್ರಹಿಸಿಕೊಂಡರು.