Matthew 16:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಫಿಲಿಪ್ಪನ ಸೆಜರೇಯ ಎಂಬ ಪ್ರಾಂತ್ಯಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನಾದ ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.
Kannada BSI Bible 2016
ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ - ಜನರು ಮನುಷ್ಯಕುಮಾರನೆಂಬ ನನ್ನನ್ನು ಯಾರು ಅನ್ನುತ್ತಾರೆ ಎಂದು ತನ್ನ ಶಿಷ್ಯರನ್ನು ಕೇಳಿದ್ದಕ್ಕೆ ಅವರು -
Kannada Bible (KNCL) BSI 2016
ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತಗಳಿಗೆ ಬಂದಾಗ ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಯಾರೆಂದು ಜನರು ಹೇಳುತ್ತಾರೆ?” ಎಂದು ಕೇಳಿದರು.