Matthew 16:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಿಷ್ಯರು, “ಕೆಲವರು ‘ಸ್ನಾನಿಕ ಯೋಹಾನ’ನೆಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ನೆಂದು ಹೇಳುತ್ತಾರೆ. ಮತ್ತೆ ಕೆಲವರು ‘ಯೆರೆಮೀಯ’ನೆಂದು ಇಲ್ಲವೆ ‘ಪ್ರವಾದಿಗಳಲ್ಲಿ ಒಬ್ಬ’ನೆಂದು ಹೇಳುತ್ತಾರೆ” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು.
Kannada BSI Bible 2016
ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ, ಬೇರೆ ಕೆಲವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.
Kannada Bible (KNCL) BSI 2016
ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವರು, “ಕೆಲವರು ಸ್ನಾನಿಕನಾದ ಯೋಹಾನನು ಎಂದು ಹೇಳುತ್ತಾರೆ, ಇನ್ನು ಕೆಲವರು ಎಲೀಯನು ಎನ್ನುತ್ತಾರೆ, ಬೇರೆಯವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ” ಎಂದರು.