Matthew 16:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.
Kannada BSI Bible 2016
ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು.
Kannada Bible (KNCL) BSI 2016
ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.