Matthew 16:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.
Kannada BSI Bible 2016
ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.
Kannada Bible (KNCL) BSI 2016
ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.