Matthew 16:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪರಲೋಕರಾಜ್ಯದ ಬೀಗದ ಕೈಗಳನ್ನು ನಾನು ನಿನಗೆ ಕೊಡುತ್ತೇನೆ. ನೀನು ಭೂಲೋಕದಲ್ಲಿ ನೀಡುವ ನ್ಯಾಯತೀರ್ಪು ದೇವರ ನ್ಯಾಯತೀರ್ಪಾಗಿರುತ್ತದೆ. ನೀನು ಭೂಲೋಕದಲ್ಲಿ ನೀಡುವ ಕ್ಷಮೆಯು ದೇವರ ಕ್ಷಮೆಯಾಗಿರುತ್ತದೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.
Kannada BSI Bible 2016
ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು; ಭೂಲೋಕದಲ್ಲಿ ನೀನು ಯಾವದನ್ನು ಕಟ್ಟುತ್ತೀಯೋ, ಅದು ಪರಲೋಕದಲ್ಲಿಯೂ ಕಟ್ಟಿರುವದು; ಮತ್ತು ಭೂಲೋಕದಲ್ಲಿ ನೀನು ಯಾವದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಿರುವದು ಅಂದನು.
Kannada Bible (KNCL) BSI 2016
ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುವೆನು; ನೀನು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀಯೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀನು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು,” ಎಂದರು.