Matthew 16:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೇಸು ತನ್ನ ಶಿಷ್ಯರಿಗೆ, ತಾನು ಕ್ರಿಸ್ತನೆಂಬುದನ್ನು ಯಾರಿಗೂ ಹೇಳಕೂಡದೆಂದು ಎಚ್ಚರಿಕೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
Kannada BSI Bible 2016
ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು - ನಾನು ಕ್ರಿಸ್ತನಾಗಿದ್ದೇನೆಂಬದನ್ನು ಯಾರಿಗೂ ಹೇಳಬೇಡಿರಿ ಎಂದು ಶಿಷ್ಯರಿಗೆ ಖಂಡಿತವಾಗಿ ಹೇಳಿದನು.
Kannada Bible (KNCL) BSI 2016
ಅನಂತರ ಯೇಸು ತಮ್ಮ ಶಿಷ್ಯರಿಗೆ ತಾವು ‘ಅಭಿಷಿಕ್ತರಾದ ಲೋಕೋದ್ಧಾರಕ’ ಎಂಬುದನ್ನು ಯಾರಿಗೂ ಹೇಳಕೂಡದೆಂದು ಕಟ್ಟಪ್ಪಣೆ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೇಸು, ತಾನೇ ಕ್ರಿಸ್ತ ಎಂಬುದನ್ನು ಯಾರಿಗೂ ಹೇಳಬಾರದೆಂದು ತಮ್ಮ ಶಿಷ್ಯರಿಗೆ ಆಜ್ಞಾಪಿಸಿದರು.