Matthew 16:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದುಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
Kannada BSI Bible 2016
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇವಿುಗೆ ಹೋಗಿ ಅಲ್ಲಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕೆಂದು ತನ್ನ ಶಿಷ್ಯರಿಗೆ ತಿಳಿಸುವದಕ್ಕೆ ಪ್ರಾರಂಭಮಾಡಿದನು.
Kannada Bible (KNCL) BSI 2016
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ\ ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು.