Matthew 16:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಪೇತ್ರನು ಯೇಸುವನ್ನು ಸ್ವಲ್ಪ ದೂರದಲ್ಲಿ ಕರೆದೊಯ್ದು, “ದೇವರು ನಿನ್ನನ್ನು ಕಾಪಾಡಲಿ, ನಿನಗೆಂದಿಗೂ ಹಾಗೆ ಸಂಭವಿಸದಿರಲಿ!” ಎಂದು ಪ್ರತಿಭಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.
Kannada BSI Bible 2016
ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪೇತ್ರನು ಆತನ ಕೈಹಿಡಿದು - ಸ್ವಾಮೀ, ದೇವರು ನಿನ್ನನ್ನು ಕಾಯಲಿ; ನಿನಗೆ ಹೀಗೆ ಎಂದಿಗೂ ಆಗಬಾರದು ಎಂದು ಆತನನ್ನು ಗದರಿಸುವದಕ್ಕೆ ಪ್ರಾರಂಭಿಸಲು
Kannada Bible (KNCL) BSI 2016
ಇದನ್ನು ಕೇಳಲಾಗದೆ ಪೇತ್ರನು ಯೇಸುವನ್ನು ಪಕ್ಕಕ್ಕೆ ಕರೆದು, “ಪ್ರಭೂ, ಹಾಗೆನ್ನಲೇಬೇಡಿ, ನಿಮಗೆಂದಿಗೂ ಹಾಗೆ ಸಂಭವಿಸದಿರಲಿ,” ಎಂದು ಪ್ರತಿಭಟಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪೇತ್ರನು ಯೇಸುವಿನ ಕೈಹಿಡಿದು, “ಹಾಗೆ ಆಗಬಾರದು ಸ್ವಾಮೀ! ಅದು ನಿಮಗೆ ಎಂದಿಗೂ ಸಂಭವಿಸಬಾರದು!” ಎಂದು ಹೇಳಿ ಯೇಸುವನ್ನು ಗದರಿಸಲಾರಂಭಿಸಿದನು.