Matthew 16:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೇಸು ಪೇತ್ರನಿಗೆ, “ಸೈತಾನನೇ, ಇಲ್ಲಿಂದ ತೊಲಗು! ನೀನು ನನಗೆ ಅಡ್ಡಿಯಾಗಿರುವೆ! ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.
Kannada BSI Bible 2016
ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ತಿರುಗಿಕೊಂಡು ಪೇತ್ರನಿಗೆ - ಸೈತಾನನೇ, ನನ್ನ ಮುಂದೆ ನಿಲ್ಲಬೇಡ, ನಡೆ, ನನಗೆ ನೀನು ವಿಘ್ನವಾಗಿದ್ದೀ; ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ ಎಂದು ಹೇಳಿದನು.
Kannada Bible (KNCL) BSI 2016
ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನೀನು ನನಗೆ ಅಡ್ಡಿಯಾಗಿದ್ದೀ; ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.