Matthew 16:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Kannada BSI Bible 2016
ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.
Kannada Bible (KNCL) BSI 2016
ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.