Matthew 16:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ನನಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ಅದನ್ನು ಉಳಿಸಿಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
Kannada BSI Bible 2016
ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು.
Kannada Bible (KNCL) BSI 2016
ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.