Matthew 16:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.
Kannada BSI Bible 2016
ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.
Kannada Bible (KNCL) BSI 2016
ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮಗೆ ನಿಜವಾಗಿ ಹೇಳುತ್ತೇನೆ: ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಪುತ್ರನಾದ ನಾನು ನನ್ನ ರಾಜ್ಯದಲ್ಲಿ ಬರುವುದನ್ನು ಕಾಣುವವರೆಗೆ ಮರಣವನ್ನು ಹೊಂದುವುದೇ ಇಲ್ಲ,” ಎಂದರು.