Matthew 16:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಳಿಗ್ಗೆ ಸೂರ್ಯೋದಯವನ್ನು ಗಮನಿಸುತ್ತೀರಿ. ಆಕಾಶವು ಕಪ್ಪಾಗಿದ್ದರೆ ಅಥವಾ ಕೆಂಪಾಗಿದ್ದರೆ, ಈ ದಿನ ಮಳೆ ಬರುತ್ತದೆ ಎಂದು ಹೇಳುತ್ತೀರಿ. ಇವುಗಳು ಹವಾಮಾನದ ಗುರುತುಗಳಾಗಿವೆ. ನೀವು ಈ ಗುರುತುಗಳನ್ನು ಕಂಡು ಅವುಗಳ ಅರ್ಥವನ್ನು ತಿಳಿದುಕೊಳ್ಳುತ್ತೀರಿ. ಅದೇ ರೀತಿಯಲ್ಲಿ ಈಗ ನೀವು ನೋಡುತ್ತಿರುವ ಇಂದಿನ ಸಂಗತಿಗಳು ಸಹ ಗುರುತುಗಳಾಗಿವೆ. ಆದರೆ ನಿಮಗೆ ಈ ಗುರುತುಗಳ ಅರ್ಥವು ಗೊತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?
Kannada BSI Bible 2016
ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಿಗ್ಗೆ - ಆಕಾಶವು ಮೋಡಮುಚ್ಚಿಕೊಂಡು ಕೆಂಪಾಗಿದೆ, ಈ ಹೊತ್ತು ಗಾಳಿ ಮಳೆ ಅನ್ನುತ್ತೀರಿ ಅಲ್ಲವೇ. ಆಕಾಶದ ಸ್ಥಿತಿಯನ್ನು ನೋಡಿ ಇದು ಹೀಗೆ ಅದು ಹಾಗೆ ಅನ್ನುವದಕ್ಕೆ ಬಲ್ಲಿರಿ; ಆದರೆ ಈ ಕಾಲದ ಸೂಚನೆಗಳನ್ನು ತಿಳುಕೊಳ್ಳಲಾರಿರಿ.
Kannada Bible (KNCL) BSI 2016
ಆಕಾಶದಲ್ಲಿ ಕಾಣುವ ಲಕ್ಷಣಗಳನ್ನು ನೀವು ಅರ್ಥಮಾಡಿಕೊಳ್ಳಬಲ್ಲಿರಿ; ಆದರೆ ಈಗಿನ ಕಾಲದ ಲಕ್ಷಣಗಳನ್ನು ಅರ್ಥಮಾಡಿಕೊಳ್ಳಲು ನಿಮ್ಮಿಂದಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳಿಗ್ಗೆ ಆಕಾಶವು ಮೋಡ ಕವಿದು ಕೆಂಪಾಗಿದ್ದರೆ, ‘ಇಂದು ಬಿರುಗಾಳಿ ಇರುವುದು’ ಎಂದೂ ನೀವು ಹೇಳುತ್ತೀರಿ. ಆಕಾಶದಲ್ಲಾಗುವ ಸೂಚನೆಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಕಾಲದ ಸೂಚನೆಗಳನ್ನು ನೀವು ಗ್ರಹಿಸಲಾರಿರಿ.