Matthew 16:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಟ್ಟವರಾದ ಮತ್ತು ಪಾಪಿಗಳಾದ ಜನರು ಸೂಚನೆಗಾಗಿ ಒಂದು ಅದ್ಭುತಕಾರ್ಯವನ್ನು ಅಪೇಕ್ಷಿಸುತ್ತಾರೆ. ಅವರಿಗೆ ಯೋನನಲ್ಲಾದ ಸೂಚಕಕಾರ್ಯವೊಂದೇ ಹೊರತು ಬೇರೆ ಯಾವ ಸೂಚಕಕಾರ್ಯವೂ ದೊರೆಯುವುದಿಲ್ಲ” ಎಂದು ಉತ್ತರಕೊಟ್ಟನು. ಬಳಿಕ ಯೇಸು ಆ ಸ್ಥಳವನ್ನು ಬಿಟ್ಟು ಹೊರಟುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.
Kannada BSI Bible 2016
ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ; ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ ಎಂದು ಉತ್ತರಕೊಟ್ಟು ಅವರನ್ನು ಬಿಟ್ಟುಹೋದನು.
Kannada Bible (KNCL) BSI 2016
ಈ ದುಷ್ಟ ಹಾಗೂ ಅಧರ್ಮ ಪೀಳಿಗೆ ಅದ್ಭುತಗಳನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವಲ್ಲದೆ ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು,” ಎಂದು ಹೇಳಿ ಅವರನ್ನು ಬಿಟ್ಟು ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು.