Matthew 16:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಿಷ್ಯರು ಇದರ ಅರ್ಥವನ್ನು ಚರ್ಚಿಸಿದರು. ಅವರು, “ನಾವು ರೊಟ್ಟಿ ತರಲು ಮರೆತುಬಿಟ್ಟದ್ದಕ್ಕಾಗಿ ಯೇಸು ಹೀಗೆ ಹೇಳಿರಬಹುದೆ?” ಎಂದು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
Kannada BSI Bible 2016
ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ರೊಟ್ಟೀಬುತ್ತಿ ಕಟ್ಟಿಕೊಳ್ಳದೆ ಬಂದೆವಲ್ಲಾ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.
Kannada Bible (KNCL) BSI 2016
ತಾವು ರೊಟ್ಟಿ ತಂದಿಲ್ಲವಾದ ಕಾರಣ ಯೇಸು ಹೀಗೆ ಹೇಳುತ್ತಿದ್ದಾರೆಂದು ಶಿಷ್ಯರು ತಮ್ಮತಮ್ಮಲ್ಲೇ ಮಾತನಾಡಿಕೊಳ್ಳಲಾರಂಭಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವರು ತಮ್ಮತಮ್ಮಲ್ಲಿಯೇ, “ನಾವು ರೊಟ್ಟಿ ತಂದಿಲ್ಲವೆಂದು ಹೀಗೆ ಹೇಳುತ್ತಾರೆ,” ಎಂದು ಮಾತನಾಡಿಕೊಂಡರು.