Matthew 16:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವಿನ್ನೂ ಅರ್ಥಮಾಡಿಕೊಳ್ಳಲಿಲ್ಲವೇ? ಐದು ರೊಟ್ಟಿಗಳಿಂದ ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು ನಿಮಗೆ ನೆನಪಿಲ್ಲವೇ? ಜನರು ಊಟ ಮಾಡಿದ ಮೇಲೆ ನೀವು ಅನೇಕ ಬುಟ್ಟಿಗಳಲ್ಲಿ ರೊಟ್ಟಿಗಳನ್ನು ತುಂಬಿಸಿದ್ದು ನಿಮಗೆ ನೆನಪಿಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ?
Kannada BSI Bible 2016
ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ನೆನಪಿಲ್ಲವೋ? ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿಸಿದಾಗ ಎಷ್ಟು ಪುಟ್ಟಿ ತುಂಬಿಟ್ಟಿರಿ?
Kannada Bible (KNCL) BSI 2016
ಏನು, ನಿಮಗಿನ್ನೂ ಅರಿವಿಲ್ಲವೆ? ಐದು ರೊಟ್ಟಿಗಳಿಂದ ನಾನು ಐದು ಸಾವಿರ ಜನರನ್ನು ತೃಪ್ತಿಪಡಿಸಿದ್ದು ನಿಮಗೆ ಜ್ಞಾಪಕವಿಲ್ಲವೆ? ಆಗ ಉಳಿದುದ್ದನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿಸಿಕೊಂಡಿರಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ, ಎಷ್ಟು ಬುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?