Matthew 17:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರು ದಿನಗಳ ತರುವಾಯ, ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ಸಹೋದರನಾದ ಯೋಹಾನನನ್ನು ಕರೆದುಕೊಂಡು ಯೇಸು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು. ಅವರಲ್ಲದೆ ಬೇರೆ ಯಾರೂ ಅಲ್ಲಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.
Kannada BSI Bible 2016
ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರು ದಿವಸಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಇವನ ತಮ್ಮನಾದ ಯೋಹಾನನನ್ನೂ ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.
Kannada Bible (KNCL) BSI 2016
ಆರು ದಿನಗಳ ಬಳಿಕ ಪೇತ್ರ, ಯೊವಾನ್ನ ಇವರನ್ನು ಯೇಸುಸ್ವಾಮಿ ಪ್ರತ್ಯೇಕವಾಗಿ ತಮ್ಮೊಡನೆ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಅವನ ಸಹೋದರ ಯೋಹಾನನನ್ನೂ ಪ್ರತ್ಯೇಕವಾಗಿ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು.