Matthew 17:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ನಿಮಗೆ ಹೇಳುವುದೇನೆಂದರೆ, ಎಲೀಯನು ಈಗಾಗಲೇ ಬಂದಿದ್ದಾನೆ. ಆದರೆ ಆತನು ಯಾರೆಂಬುದು ಜನರಿಗೆ ತಿಳಿಯಲಿಲ್ಲ. ಜನರು ತಮಗಿಷ್ಟಬಂದಂತೆ ಅವನನ್ನು ಹಿಂಸಿಸಿದರು. ಅದೇ ರೀತಿ ಅವರು ಮನುಷ್ಯಕುಮಾರನನ್ನು ಹಿಂಸೆಪಡಿಸುವರು” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು” ಎಂದು ಉತ್ತರ ಕೊಟ್ಟನು.
Kannada BSI Bible 2016
ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಾನು ನಿಮಗೆ ಹೇಳುವದೇನಂದರೆ, ಎಲೀಯನು ಬಂದು ಹೋದನು; ಜನರು ಅವನ ಗುರುತು ಅರಿಯದೆ ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು. ಅವನಿಗಾದಂತೆ ಮನುಷ್ಯಕುಮಾರನಿಗೆ ಸಹ ಅವರ ಕಡೆಯಿಂದ ಹಿಂಸೆಯಾಗುವದು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಆದರೆ ನಾನು ನಿಮಗೆ ಹೇಳುತ್ತೇನೆ; ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸದೇ ತಮಗೆ ಇಷ್ಟಬಂದ ಹಾಗೆ ಹಿಂಸಿಸಿದ್ದೂ ಆಗಿದೆ. ಅಂತೆಯೇ ನರಪುತ್ರನೂ ಅವರ ಕೈಯಿಂದ ಯಾತನೆಯನ್ನು ಅನುಭವಿಸುವನು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಎಲೀಯನು ಆಗಲೇ ಬಂದಾಯಿತು; ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಪುತ್ರನಾದ ನಾನು ಸಹ ಅವರಿಂದ ಕಷ್ಟವನ್ನು ಅನುಭವಿಸುವೆನು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.