Matthew 17:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,
Kannada BSI Bible 2016
ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ನಂಬಿಕೆ ಕಡಿಮೆಯಾಗಿರುವದರಿಂದಲೇ ಆಗಲಿಲ್ಲ; ನಿಮಗೆ ಸತ್ಯವಾಗಿ ಹೇಳುತ್ತೇನೆ, ಸಾಸಿವೇಕಾಳಷ್ಟು ನಂಬಿಕೆ ನಿಮಗೆ ಇರುವದಾದರೆ ನೀವು ಈ ಬೆಟ್ಟಕ್ಕೆ -
Kannada Bible (KNCL) BSI 2016
ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.