Matthew 17:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಪೇತ್ರನು, “ಹೌದು, ಸಲ್ಲಿಸುತ್ತಾನೆ” ಎಂದು ಉತ್ತರಕೊಟ್ಟನು. ಬಳಿಕ ಪೇತ್ರನು ಯೇಸುವಿದ್ದ ಮನೆಯೊಳಕ್ಕೆ ಹೋದನು. ಅವನು ಈ ವಿಷಯವನ್ನು ಹೇಳುವುದಕ್ಕಿಂತ ಮೊದಲೇ ಯೇಸು ಅವನಿಗೆ, “ಭೂಲೋಕದ ರಾಜರುಗಳು ಜನರಿಂದ ಅನೇಕ ಬಗೆಯ ತೆರಿಗೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ತೆರಿಗೆ ಕೊಡುವ ಜನರು ಯಾರು? ರಾಜನ ಮಕ್ಕಳೇ ಅಥವಾ ಬೇರೆ ಜನರೇ? ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.
Kannada BSI Bible 2016
ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೇತ್ರನು ಮನೆಯೊಳಕ್ಕೆ ಬಂದಾಗ ಯೇಸು ಅವನಿಗಿಂತ ಮೊದಲೇ - ಸೀಮೋನಾ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಸುಂಕವನ್ನಾಗಲಿ ಮಂಡೇತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ? ಬೇರೆಯವರಿಂದಲೋ ಎಂದು ಕೇಳಿದನು.
Kannada Bible (KNCL) BSI 2016
ಬಳಿಕ ಮನೆಗೆ ಬಂದಾಗ, ಅವನು ಮಾತೆತ್ತುವುದಕ್ಕೆ ಮೊದಲೇ ಯೇಸು, “ಸಿಮೋನಾ, ನಿನಗೆ ಏನನ್ನಿಸುತ್ತದೆ? ಇಹಲೋಕದ ರಾಜರು ಕಂದಾಯವನ್ನಾಗಲಿ, ತೆರಿಗೆಯನ್ನಾಗಲಿ ಯಾರಿಂದ ವಸೂಲಿಮಾಡುತ್ತಾರೆ? ತಮ್ಮ ಪುತ್ರರಿಂದಲೋ ಅಥವಾ ಪರರಿಂದಲೋ?\ ಎಂದು ಕೇಳಿದರು. “ಪರರಿಂದಲೇ,” ಎಂದು ಪೇತ್ರನು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದನು. ಅವನು ಮನೆಯೊಳಕ್ಕೆ ಬಂದಾಗ ಯೇಸು ಮುಂದಾಗಿಯೇ ಅವನಿಗೆ, “ಸೀಮೋನನೇ ನಿನಗೆ ಹೇಗೆ ತೋರುತ್ತದೆ? ಭೂಲೋಕದ ರಾಜರು ಯಾರಿಂದ ಕಂದಾಯವನ್ನು ಇಲ್ಲವೆ ತೆರಿಗೆಯನ್ನು ವಸೂಲಿ ಮಾಡುತ್ತಾರೆ? ತಮ್ಮ ಪುತ್ರರಿಂದಲೋ ಇಲ್ಲವೆ ಪರರಿಂದಲೋ?” ಎಂದು ಕೇಳಿದರು.