Matthew 17:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.
Kannada BSI Bible 2016
ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನಮ್ಮ ವಿಷಯವಾಗಿ ಅವರು ಬೇಸರಗೊಳ್ಳಬಾರದು; ನೀನು ಸಮುದ್ರಕ್ಕೆ ಹೋಗಿ ಗಾಳಾ ಹಾಕಿ ಮೊದಲು ಸಿಕ್ಕುವ ಮೀನನ್ನು ಎತ್ತು; ಅದರ ಬಾಯಿ ತೆರೆದು ನೋಡಿದರೆ ಅದರಲ್ಲಿ ಒಂದು ರೂಪಾಯಿ ಸಿಕ್ಕುವದು; ಅದನ್ನು ತೆಗೆದುಕೊಂಡು ನಮ್ಮಿಬ್ಬರದಂತ ಹೇಳಿ ಅವರಿಗೆ ಕೊಡು ಎಂದು ಹೇಳಿದನು.
Kannada Bible (KNCL) BSI 2016
ಆದರೂ, ನಾವು ಇವರಿಗೆ ಅಡ್ಡಿಯಾಗಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು.