Matthew 17:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೇತ್ರನು ಯೇಸುವಿಗೆ, “ಪ್ರಭುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಇಷ್ಟಪಟ್ಟರೆ ಇಲ್ಲಿ ಮೂರು ಡೇರೆಗಳನ್ನು ಹಾಕುವೆವು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
Kannada BSI Bible 2016
ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪೇತ್ರನು ಯೇಸುವಿಗೆ - ಸ್ವಾಮೀ, ನಾವು ಇಲ್ಲೇ ಇರುವದು ಒಳ್ಳೇದು. ಅಪ್ಪಣೆಯಾದರೆ ಇಲ್ಲಿ ಮೂರು ಪರ್ಣಶಾಲೆಗಳನ್ನು ಕಟ್ಟುವೆನು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು ಎಂದು ಹೇಳಿದನು.
Kannada Bible (KNCL) BSI 2016
ಆಗ ಪೇತ್ರನು ಯೇಸುವಿಗೆ, “ಪ್ರಭೂ, ನಾವು ಇಲ್ಲೇ ಇರುವುದು ಎಷ್ಟು ಒಳ್ಳೆಯದು! ಅಪ್ಪಣೆಯಾದರೆ ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ತಮಗೊಂದು, ಮೋಶೆಗೊಂದು, ಎಲೀಯನಿಗೊಂದು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲಿಯೇ ಇರುವುದು ಒಳ್ಳೆಯದು. ನಿಮಗೆ ಮನಸ್ಸಿದ್ದರೆ ನಾನು ನಿಮಗೊಂದು, ಮೋಶೆಗೊಂದು, ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ಕಟ್ಟುವೆನು,” ಎಂದು ಹೇಳಿದನು.