Matthew 17:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.
Kannada BSI Bible 2016
ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆ ಬೆಟ್ಟದಿಂದ ಇಳಿದುಬರುತ್ತಿರುವಾಗ ಯೇಸು ಅವರಿಗೆ - ನೀವು ಈಗ ಕಂಡ ದರ್ಶನವನ್ನು ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬೇಡಿರೆಂದು ಖಂಡಿತವಾಗಿ ಹೇಳಿದನು.
Kannada Bible (KNCL) BSI 2016
ಅವರೆಲ್ಲರು ಬೆಟ್ಟದಿಂದ ಇಳಿದುಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು.