Matthew 18:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬ ಮನುಷ್ಯನಿಗೆ ನೂರು ಕುರಿಗಳಿದ್ದು ಅದರಲ್ಲಿ ಒಂದು ಕುರಿಯು ತಪ್ಪಿಸಿಕೊಂಡರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಬೆಟ್ಟದ ಮೇಲೆಯೇ ಬಿಟ್ಟು ತಪ್ಪಿಸಿಕೊಂಡ ಕುರಿಯನ್ನು ಹುಡುಕಲು ಹೋಗುತ್ತಾನಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿಮ್ಮಲ್ಲಿ ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?
Kannada BSI Bible 2016
ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡರೆ ಅವನು ತೊಂಭತ್ತೊಂಭತ್ತು ಕುರಿಗಳನ್ನು ಬಿಟ್ಟು ಬೆಟ್ಟಕ್ಕೆ ಹೋಗಿ ತಪ್ಪಿಸಿಕೊಂಡದ್ದನ್ನು ಹುಡುಕುತ್ತಾನಲ್ಲವೇ.
Kannada Bible (KNCL) BSI 2016
“ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡುಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ನಿಮಗೆ ಏನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳಿರಲಾಗಿ, ಅವುಗಳಲ್ಲಿ ಒಂದು ತಪ್ಪಿಸಿಕೊಂಡುಹೋದರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಬಿಟ್ಟು ಬೆಟ್ಟಗಳಿಗೆ ಹೋಗಿ, ತಪ್ಪಿಸಿಕೊಂಡದ್ದನ್ನು ಹುಡುಕುವುದಿಲ್ಲವೇ?