Matthew 18:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಪ್ಪಿಸಿಕೊಂಡ ಕುರಿಯು ಸಿಕ್ಕಿದರೆ, ತಪ್ಪಿಸಕೊಳ್ಳದಿದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದು ಕುರಿಯ ವಿಷಯದಲ್ಲಿ ಅವನು ಬಹಳ ಸಂತೋಷಪಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada BSI Bible 2016
ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಸಿಕ್ಕಿದರೆ ತಪ್ಪಿಸಿಕೊಳ್ಳದೆ ಇರುವ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದಕ್ಕೋಸ್ಕರ ಹೆಚ್ಚಾಗಿ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada Bible (KNCL) BSI 2016
ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಆ ತೊಂಬತ್ತೊಂಬತ್ತು ಕುರಿಗಳಿಗಿಂತ ಸಿಕ್ಕಿದ ಆ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅದನ್ನು ಕಂಡರೆ, ತಪ್ಪಿಸಿಕೊಳ್ಳದ ತೊಂಬತ್ತೊಂಬತ್ತು ಕುರಿಗಳಿಗಿಂತ ಈ ಒಂದು ಕುರಿಯ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆಂದು ನಿಮಗೆ ನಿಜವಾಗಿ ಹೇಳುತ್ತೇನೆ.