Matthew 18:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿನ್ನ ಸಹೋದರನಾಗಲಿ ಸಹೋದರಿಯಾಗಲಿ ನಿನಗೆ ಯಾವುದಾದರೂ ತಪ್ಪು ಮಾಡಿದರೆ, ನೀನು ಹೋಗಿ ಅವನೊಬ್ಬನೇ ಇರುವಾಗ ಅವನ ತಪ್ಪನ್ನು ತಿಳಿಸು. ಅವನು ನಿನ್ನ ಮಾತಿಗೆ ಕಿವಿಗೊಟ್ಟರೆ, ಮತ್ತೆ ನಿನ್ನ ಸಹೋದರನಾಗಿರಲು ನೀನೇ ಅವನಿಗೆ ಸಹಾಯ ಮಾಡಿದಂತಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.
Kannada BSI Bible 2016
ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಿನ್ನ ಸಹೋದರನು ತಪ್ಪುಮಾಡಿದರೆ ನೀನು ಹೋಗಿ ನೀನೂ ಅವನೂ ಇಬ್ಬರೇ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.
Kannada Bible (KNCL) BSI 2016
“ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ.