Matthew 18:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವನು ನಿನ್ನ ಮಾತನ್ನು ಕೇಳದಿದ್ದರೆ, ನಿನ್ನೊಂದಿಗೆ ಒಬ್ಬಿಬ್ಬರನ್ನು ಕರೆದುಕೊಂಡು ಮತ್ತೆ ಅವನ ಬಳಿಗೆ ಹೋಗು. ಆಗ ಪ್ರತಿಯೊಂದು ದೂರಿನ ವಿಷಯದಲ್ಲೂ ಇಬ್ಬರು ಅಥವಾ ಮೂವರು ಸಾಕ್ಷಿಗಳಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.
Kannada BSI Bible 2016
ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಕೇಳದೆಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪನೆಯಾಗುವ ಹಾಗೆ ಇನ್ನೂ ಒಬ್ಬಿಬ್ಬರನ್ನು ನಿನ್ನ ಸಂಗಡ ಕರಕೊಂಡು ಹೋಗು.
Kannada Bible (KNCL) BSI 2016
ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ನಿನಗೆ ಕಿವಿಗೊಡದೆ ಹೋದರೆ, ನಿನ್ನೊಂದಿಗೆ ಇಬ್ಬರನ್ನು ಕರೆದುಕೊಂಡು ಹೋಗು. ಹೀಗೆ, ‘ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪಿತವಾಗಲಿ.’