Matthew 18:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಅವರ ಮಾತನ್ನೂ ಕೇಳದಿದ್ದರೆ, ಸಭೆಗೆ ತಿಳಿಸು. ಅವನು ಸಭೆಯ ಮಾತನ್ನೂ ಕೇಳದಿದ್ದರೆ ಅವನನ್ನು ದೇವರಲ್ಲಿ ನಂಬಿಕೆ ಇಡದ ಮನುಷ್ಯನಂತಾಗಲಿ ಸುಂಕವಸೂಲಿಗಾರನಂತಾಗಲಿ ಪರಿಗಣಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
Kannada BSI Bible 2016
ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವರ ಮಾತನ್ನು ಕೇಳದೆ ಹೋದರೆ ಸಭೆಗೆ ಹೇಳು; ಆದರೆ ಸಭೆಯ ಮಾತನ್ನೂ ಕೇಳದೆಹೋದರೆ ಅವನು ನಿನಗೆ ಅಜ್ಞಾನಿಯಂತೆಯೂ ಭ್ರಷ್ಟನಂತೆಯೂ ಇರಲಿ.
Kannada Bible (KNCL) BSI 2016
ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅವರಿಗೂ ಕಿವಿಗೊಡದೆ ಹೋದರೆ ಅದನ್ನು ಸಭೆಗೆ ತಿಳಿಸು. ಅವರು ಸಭೆಗೂ ಕಿವಿಗೊಡದೆ ಹೋದರೆ, ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.