Matthew 18:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ ನಿಮ್ಮಲ್ಲಿ ಇಬ್ಬರು ಈ ಲೋಕದಲ್ಲಿ ಒಮ್ಮನಸ್ಸಿನಿಂದ ಏನನ್ನೇ ಬೇಡಿಕೊಂಡರೂ ಪರಲೋಕದಲ್ಲಿರುವ ನನ್ನ ತಂದೆ ಅದನ್ನು ನೆರವೇರಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.
Kannada BSI Bible 2016
ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳತಕ್ಕ ಯಾವದಾದರೂ ಒಂದು ಕಾರ್ಯದ ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದೆಂದು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
“ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು.